ಬೆಳಗಾವಿ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತಂಡ ಅಂತಿಮ ಹಂತದ ತನಿಖೆ ನಡೆಸುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ, ಅವರ ತನಿಖೆಯೇ ಅಂತಿಮ ಎಂದಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ್ಯ ಆಗಿದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಂಬಂಧಿಸಿದಂತೆ ನಾವೇನೂ ಮಾಡಲು ಆಗಲ್ಲ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.
ಪೊಲೀಸರು ತನಿಖೆ ಏನು ಮಾಡುತ್ತಾರೆ ಅದೇ ಅಂತಿಮ. ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದರು. ಇದೇ ವೇಳೆ ಕೆ.ಎನ್.ರಾಜಣ್ಣ ವಜಾ ವಿಚಾರವಾಗಿ ಇಂದು ರಾಜಕೀಯವಾಗಿ ಯಾವುದೇ ಚರ್ಚೆಗಳು ಬೇಡ. ಇಂದು ಒಂದು ದಿನ ರೆಸ್ಟ್ ಎಂದು ಹೇಳುವ ಮೂಲಕ ಪ್ರತಿಕ್ರಿಯೆಗೆ ನಿರಾಕರಿಸಿದರು.