ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಾಳಿಬೆಟ್ಟ ಕ್ರಾಸ್ ನಲ್ಲಿ ನಡೆದಿದೆ.
ಬೆಂಗಳೂರು ಮೂಲದ ಪ್ರದೀಪ್ (20) ಹಾಗೂ ಭವೀಶ್ (21) ಮೃತ ವಿದ್ಯಾರ್ಥಿಗಳು. ಬೆಂಗಳೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ವಿದ್ಯಾರ್ಥಿಗಳು ಹೋಗುತ್ತಿದ್ದರು. ಈ ವೇಳೆ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ವಿದ್ಯಾರ್ಥಿಗಳಿಬ್ಬರ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.