HomeLatest NewsBREAKING: ಕಲಬುರಗಿ ಶರಣಬಸವೇಶ್ವರ ದೇವಾಲಯದ ಆವರಣದಲ್ಲಿ ಶರಣಬಸವಪ್ಪ ಅಪ್ಪ ಕ್ರಿಯಾ ಸಮಾಧಿ

BREAKING: ಕಲಬುರಗಿ ಶರಣಬಸವೇಶ್ವರ ದೇವಾಲಯದ ಆವರಣದಲ್ಲಿ ಶರಣಬಸವಪ್ಪ ಅಪ್ಪ ಕ್ರಿಯಾ ಸಮಾಧಿ

ಕಲಬುರಗಿ: ನಿನ್ನೆ ರಾತ್ರಿ ನಿಧನರಾದ ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪರಿ, ಶರಣಬಸವೇಶ್ವರ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿದ್ದ ಶರಣಬಸವಪ್ಪ ಅಪ್ಪ(90) ಅವರ ಕ್ರಿಯಾಸಮಾಧಿ ನೆರವೇರಿಸಲಾಗಿದೆ.

ಕಲಬುರಗಿಯ ಶರಣಬಸವೇಶ್ವರ ದೇವಾಲಯದ ಆವರಣದಲ್ಲಿ ಶರಣಬಸವೇಶ್ವರ ಸಂಸ್ಥಾನದ ಎಂಟನೇ ಪೀಠಾಧಿಪತಿಯಾಗಿ ಸೇವೆ ಸಲ್ಲಿಸಿದ್ದ ಶರಣಬಸವಪ್ಪ ಅಪ್ಪ ಕ್ರಿಯಾ ಸಮಾಧಿ ನೆರವೇರಿಸಲಾಗಿದೆ. ವಿವಿಧ ಮಠಾಧೀಶರ ಸಮ್ಮುಖದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಜರುಗಿವೆ.

ಪಂಚಾಚಾರ್ಯರ ಕಳಸ ಸ್ಥಾಪಿಸಿ ಸೋಮನಾಥ ಶಾಸ್ತ್ರಿ ಸ್ವಸ್ತಿ ಪುಣ್ಯ ವಾಚಿಸಿದ್ದಾರೆ. ಪಲ್ಲಕ್ಕಿಯಲ್ಲಿ ಶರಣಬಸವಪ್ಪ ಪಾರ್ಥಿವ ಶರೀರ ಇರಿಸಿ ಐದು ಸುತ್ತು ಪ್ರದಕ್ಷಿಣೆ ಹಾಕಲಾಗಿದೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಶರಣಬಸವಪ್ಪ ಅಂತ್ಯಕ್ರಿಯೆ ನಡೆದಿದೆ. ಅಂತ್ಯಕ್ರಿಯೆಯಲ್ಲಿ ಸಚಿವರಾದ ಶರಣಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್, ಪತ್ನಿ ದಾಕ್ಷಾಯಿಣಿ ಎಸ್.ಅಪ್ಪ, ಪುತ್ರ ದೊಡ್ಡಪ್ಪ ಅಪ್ಪ ಹಾಗೂ ಕುಟುಂಬಸ್ಥರು, ಭಕ್ತರು ಇದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular