HomeLatest Newsಪರಪ್ಪನ ಅಗ್ರಹಾರ ಜೈಲಲ್ಲಿ ನಟ ದರ್ಶನ್ ಗೆ ವಿಚಾರಣಾಧೀನ ಕೈದಿ ಸಂಖ್ಯೆ 7314

ಪರಪ್ಪನ ಅಗ್ರಹಾರ ಜೈಲಲ್ಲಿ ನಟ ದರ್ಶನ್ ಗೆ ವಿಚಾರಣಾಧೀನ ಕೈದಿ ಸಂಖ್ಯೆ 7314

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಸೇರಿದಂತೆ, ಐದು ಮಂದಿಗೆ ವಿಚಾರಣಾಧೀನ ಕೈದಿ ಸಂಖ್ಯೆಗಳನ್ನು ಜೈಲಾಧಿಕಾರಿಗಳು ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ 7313, ಎ2 ಆರೋಪಿ ದರ್ಶನ್ ಅವರಿಗೆ 7314 ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗಿದೆ.

ಎ11 ಆರೋಪಿ ಆರ್. ನಾಗರಾಜ್ 7315, ಎ12 ಆರೋಪಿ ಎಂ. ಲಕ್ಷ್ಮಣ್ ಗೆ 7316, ಪ್ರದೋಶ್ ಅವರಿಗೆ 7317 ವಿಚಾರಣಾ ಕೈದಿ ಸಂಖ್ಯೆ ನೀಡಲಾಗಿದೆ. ಇದೇ ಪ್ರಕರಣದಲ್ಲಿ ಕಳೆದ ವರ್ಷ ಜೂನ್ ನಲ್ಲಿ ಬಂಧಿಸಿದ ಸಂದರ್ಭದಲ್ಲಿ ದರ್ಶನ್ ಗೆ ಕೈದಿ ಸಂಖ್ಯೆ 6106 ನೀಡಲಾಗಿತ್ತು. ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರವಾದ ಬಳಿಕ ಕೈದಿ ಸಂಖ್ಯೆ 511 ನೀಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular