HomeLatest NewsBREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ: ಮೂವರು ಸ್ಥಳದಲ್ಲೇ...

BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, 7 ಮಂದಿ ಗಂಭೀರ

ಕಾರವಾರ: ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಲ್ಲಾಪುರ ಮಾವಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ಬಸ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಜನರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗಲಕೋಟೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಯಲ್ಲಾಪುರ -ಅಂಕೋಲಾ ರಸ್ತೆಯ ದಟ್ಟ ಕಾಡಿನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕೇರಳ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತರು ಬಾಗಲಕೋಟೆ ಮೂಲದವರು ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular