ಬೆಂಗಳೂರು : ‘ಫೈನ್’ ಕಟ್ಟಿ ಎಂದಿದ್ದಕ್ಕೆ ಟ್ರಾಫಿಕ್ ಪೊಲೀಸರ ಜೊತೆ ಅನುಚಿತವಾಗಿ ವರ್ತಿಸಿ ಅಶ್ಲೀಲವಾಗಿ ಬೈದಿದ್ದಕ್ಕೆ ಇಬ್ಬರು ಪೊಲೀಸರ ಅತಿಥಿಯಾಗಿದ್ದಾರೆ.
ಬಂಧಿತರನ್ನು ಮೊಹಮ್ಮದ್ ಸರ್ಬಾನ್ ಹಾಗೂ ಹಿರಲ್ ವ್ಯಾಸ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ನಡೆದ ಘಟನೆಯ ವಿಡಿಯೋವನ್ನು ಟ್ರಾಫಿಕ್ ಪೊಲೀಸರು ಟ್ವೀಟ್ ನಲ್ಲಿ ಹಂಚಿಕೊಂಡಿದ್ದಾರೆ.
ಶೇಷಾದ್ರಿಪುರಂ ಕಾಲೇಜಿನ ಮುಂಭಾಗದಲ್ಲಿ ನೋ ಪಾರ್ಕಿಂಗ್ ಜಾಗದಲ್ಲಿ ಬುಲೆಟ್ ಬೈಕ್ ಒಂದನ್ನ ನಿಲ್ಲಿಸಲಾಗಿತ್ತು. ಇದನ್ನು ಗಮನಿಸಿದ ಪೊಲೀಸರು ವೀಲ್ ಗೆ ಕ್ಯಾಂಪ್ ಹಾಕಿದ್ದರು. ಕೆಲಹೊತ್ತಿನ ಬಳಿಕ ಬೈಕ್ ಸವಾರ ಸರ್ಬಾನ್ ಬಂದು ನೋಡಿದಾಗ ಬೈಕ್ ಗೆ ಕ್ಯಾಂಪ್ ಹಾಕಿರುವುದು ಗೊತ್ತಾಗಿದೆ. ಸ್ಥಳಕ್ಕೆ ಆಗಮಿಸಿದ ಪಿಎಸ್ ಐ ನಿರ್ಮಲಾ ನೀವು ನೋ ಪಾರ್ಕಿಂಗ್ ನಲ್ಲಿ ವಾಹನ ನಿಲ್ಲಿಸಿದ್ದೀರಾ..! ಫೈನ್ ಕಟ್ಟಿ ಎಂದು ಹೇಳಿದ್ದಾರೆ. ಈ ವಿಚಾರಕ್ಕೆ ಸರ್ಬಾನ್ ಹಾಗೂ ಆತನ ಗೆಳತಿ ಹಿರಲ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈ ಸನ್ನೆ ಮಾಡಿದ್ದಾರೆ ಎನ್ನಲಾಗಿದೆ. ನಂತರ ಸ್ಥಳಕ್ಕಾಗಮಿಸಿದ ನ್ಯೂ ಟೌನ್ ಪೊಲೀಸರು ಇಬ್ಬರನ್ನ ಬಂಧಿಸಿ ಎಫ್ ಐ ಆರ್ ದಾಖಲಿಸಿದ್ದಾರೆ.
ಪೊಲೀಸರ ಮೇಲೆ ಕೂಗಾಡುವುದರಿಂದ ನೀವು ವೀರರಾಗುವುದಿಲ್ಲ. ಅಸಭ್ಯ ಪದಗಳು ಮತ್ತು ಬೆದರಿಕೆಗಳು ನಿಮಗೆ ವಿಶೇಷ ವ್ಯಕ್ತಿಯಂತೆ ವಿಶೇಷ ಉಪಚಾರದ ಪಾಸ್ಗೆ ಕಾರಣವಾಗಬಹುದು—ಅದುವೇ ನೇರ ಪೊಲೀಸ್ ಠಾಣೆಗೆ. ಎಚ್ಚರಿಕೆ! ಬೆಂಗಳೂರು ನಗರ ಪೊಲೀಸರು ನಿಮ್ಮನ್ನು ಗಮನಿಸುತ್ತಿದ್ದಾರೆ.
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) August 15, 2025
Shouting at the police won’t make you a hero. Vulgar words… pic.twitter.com/qzFAesPJza