BREAKING: ಜೈಲಿಂದ ಅಭಿಮಾನಿಗಳಿಗೆ ಸಂದೇಶ ಕಳಿಸಿದ ನಟ ದರ್ಶನ್: ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ಸಿನಿಮಾ ನೋಡಲು ಮನವಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದ ಹಿನ್ನೆಲೆಯಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ.

ತಮ್ಮ ಅಭಿಮಾನಿಗಳಿಗೆ ಜೈಲಿನಿಂದ ದರ್ಶನ್ ಸಂದೇಶ ಕಳುಹಿಸಿದ್ದು, ಅವರ ಸಂದೇಶವನ್ನು ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮಾಡಿದ್ದಾರೆ.

“ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ‌ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು.

ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ‌ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.

ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ‌ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ , ಹಾಗಾಗಿ ನನ್ನ “ ದಿ ಡೆವಿಲ್ “ ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೆ ಅಡೆತಡೆಇಲ್ಲದೆ ಸಾಗಲಿ ಎಂಬುಂದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತೇದ್ದೇನೆ. ಹಾಗು ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿನಂಬಿದ್ದೇನೆ.

“ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು.” ಎಂದು ತಿಳಿಸಿದ್ದಾರೆ.

https://www.instagram.com/p/DNaqNjYPEhO/?utm_source=ig_web_copy_link&igsh=MzRlODBiNWFlZA==

View this post on Instagram

A post shared by Vijayalakshmi darshan (@viji.darshan)

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read