ಶಿವಮೊಗ್ಗ: ಆಸ್ಪತ್ರೆ ಶೌಚಾಲಯದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯ ಶರಾವತಿ ವಾರ್ಡ್ ನಲ್ಲಿ ಮಗುವಿನ ಶವ ಪತ್ತೆಯಾಗಿದ್ದು, ಮಗುವಿನ ಹೊತ್ತು ಕೊಯ್ದು ಶೌಚಾಲಯದಲ್ಲಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ.
ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಶಿಶುವಿನ ಶವ ಪತ್ತೆಯಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶೀಲಾ ಎಂಬುವವರ ಮೇಲೆ ಪೊಲೀಸ್ ಅಧಿಕಾರಿಗಳಿಗೆ ಅನುಮಾನ ಉಂಟಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ತಿಮ್ಲಾಪುರ ಗ್ರಾಮದ ಶೀಲಾ ಎಂಬುವವರಿಗೆ ಇಂದು ಹೆರಿಗೆಯಾಗಿತ್ತು. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.