HomeLatest NewsBREAKING: ಹಸುಗಳ ಕತ್ತು ಕೊಯ್ದು ನಡುರಸ್ತೆಯಲ್ಲೇ ಎಸೆದಿದ್ದ ಮೂವರು ಅರೆಸ್ಟ್

BREAKING: ಹಸುಗಳ ಕತ್ತು ಕೊಯ್ದು ನಡುರಸ್ತೆಯಲ್ಲೇ ಎಸೆದಿದ್ದ ಮೂವರು ಅರೆಸ್ಟ್

ಬೆಂಗಳೂರು: ಹಸುಗಳ ಕತ್ತು ಕೊಯ್ದು ನಡುರಸ್ತೆಯಲ್ಲಿ ಬಿಸಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್(30), ಸೈಯದ್ ನವಾಜ್(35) ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ನೆಲಮಂಗಲ ಗ್ರಾಮಾಂತರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದ ಸೇತುವೆಯ ಮೇಲೆ ಎರಡು ನಾಟಿ ಹಸುಗಳ ಮೃತದೇಹ ಪತ್ತೆಯಾಗಿತ್ತು. ಬಂಧಿತ ಆರೋಪಿಗಳು ಹಸುಗಳ ಕತ್ತು ಕೊಯ್ದಿದ್ದು, ಮೈಯೆಲ್ಲಾ ಗಾಯದ ಗುರುತುಗಳು ಕಂಡು ಬಂದಿದ್ದವು. ಹಸುಗಳ ಕತ್ತು ಕೊಯ್ದ ಪ್ರಕರಣದ ಬಗ್ಗೆ ಸದನದಲ್ಲಿಯೂ ಚರ್ಚೆಯಾಗಿತ್ತು.

ಹಸು ಕಡಿದು ಮಾಂಸ ಮಾರಲು ಕೇರಳಕ್ಕೆ ಹಸುಗಳನ್ನು ಬಂಧಿತರು ಸಾಗಿಸುತ್ತಿದ್ದರು. ಈ ವೇಳೆ ಎರಡು ಹಸುಗಳ ಮಾಂಸ ತಿನ್ನಲು ಯೋಗ್ಯವಲ್ಲ ಎಂದು ಗೊತ್ತಾಗಿದ್ದರಿಂದ ಎರಡು ಹಸುಗಳ ಕತ್ತು ಕೊಯ್ದು ನಡುರಸ್ತೆಯಲ್ಲೇ ಹೋಗಿದ್ದರು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular