ನವದೆಹಲಿ: ಮತಗಳ್ಳತನ ಬಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಂದು ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ಕರೆಯಲಾಗಿದೆ.
ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ರಾಹುಲ್ ಗಾಂಧಿ ಅವರ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡಲಿದೆ.
ಕೇಂದ್ರ ಚುನಾವಣ ಆಯೋಗದಿಂದ ಭಾನುವಾರ ಮಧ್ಯಾಹ್ನ 3 ಗಂಟೆಗೆ ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ ಸುದ್ದಿಗೋಷ್ಠಿ ಕರೆಯಲಾಗಿದೆ. ರಾಜಕೀಯ ಬಿರುಗಾಳಿ ಎಬ್ಬಿಸಿರುವ ಮತಗಳ್ಳತನ ಆರೋಪ, ಬಿಹಾರ ಮತಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ನಂತರ ಕೇಂದ್ರ ಚುನಾವಣಾ ಆಯೋಗ ಕರೆದ ಮೊದಲ ಸುದ್ದಿಗೋಷ್ಠಿ ಇದಾಗಿದೆ.
ರಾಹುಲ್ ಗಾಂಧಿ ಆರೋಪ, ಎಸ್ಐಆರ್ ವಿರೋಧಿಸಿ ಪ್ರತಿ ಪಕ್ಷಗಳ ನಾಯಕರು ಹೋರಾಟ ತೀವ್ರಗೊಳಿಸಿರುವ ಮಧ್ಯೆ ಆಯೋಗ ಸುದ್ದಿಗೋಷ್ಠಿ ಕರೆದಿದ್ದು, ಎಲ್ಲಾ ಆರೋಪಗಳಿಗೆ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.