ಮಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ, ಷಡ್ಯಂತ್ರ ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಂಲ್ಲಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಬೀಡು ಬಿಟ್ಟಿರುವ ಬಿಜೆಪಿ ನಾಯಕರು ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿರುವ ಬಿ.ವೈ.ವಿಜಯೇಂದ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುವ ಹುನ್ನಾರ ನಡೆದಿದೆ. ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಹೇಳಿದ್ದಾರೆ. ಆ ಷಡ್ಯಂತ್ರ ಯಾವುದು ಎಂದು ಅವರು ಬಯಲು ಮಾಡಬೇಕು. ಎಸ್ ಐಟಿ ಮಧ್ಯಂತರ ತನಿಖಾ ವರದಿ ಬಿಡಿಗಡೆ ಮಾಡಲಿ ಎಂದು ಆಗ್ರಹಿಸಿದರು.