HomeLatest NewsBREAKING: ‘ಬಿಗ್ ಬಾಸ್’ ಸ್ಪರ್ಧಿ, ಯೂಟ್ಯೂಬರ್ ಎಲ್ವಿಶ್ ಯಾದವ್ ಮನೆ ಮೇಲೆ ಭಾರೀ ಗುಂಡಿನ ದಾಳಿ...

BREAKING: ‘ಬಿಗ್ ಬಾಸ್’ ಸ್ಪರ್ಧಿ, ಯೂಟ್ಯೂಬರ್ ಎಲ್ವಿಶ್ ಯಾದವ್ ಮನೆ ಮೇಲೆ ಭಾರೀ ಗುಂಡಿನ ದಾಳಿ | WATCH VIDEO

ಗುರುಗ್ರಾಮ್: ವಿವಾದಾತ್ಮಕ ಯೂಟ್ಯೂಬರ್ ಮತ್ತು ‘ಬಿಗ್ ಬಾಸ್’ ವಿಜೇತ ಎಲ್ವಿಶ್ ಯಾದವ್ ಅವರ ಮನೆಯ ಹೊರಗೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.

ಭಾನುವಾರ ಮುಂಜಾನೆ ಗುರುಗ್ರಾಮ್‌ ನಲ್ಲಿರುವ ನಿವಾಸದಲ್ಲಿ ಇಂದು ಬೆಳಿಗ್ಗೆ 5.30 ರಿಂದ 6 ಗಂಟೆಯ ನಡುವೆ ಈ ಘಟನೆ ನಡೆದಿದ್ದು, ಬೈಕ್‌ನಲ್ಲಿ ಬಂದ ಮೂವರು ವ್ಯಕ್ತಿಗಳು ಸೆಕ್ಟರ್ 57 ರಲ್ಲಿರುವ ಯಾದವ್ ಅವರ ಮನೆಯ ಮೇಲೆ ಎರಡು ಡಜನ್ ಗೂ ಹೆಚ್ಚು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗುಂಡುಗಳು ಮನೆಯ ನೆಲ ಮತ್ತು ಮೊದಲ ಮಹಡಿಗೆ ತಗುಲಿವೆ.

ಎರಡನೇ ಮತ್ತು ಮೂರನೇ ಮಹಡಿಯಲ್ಲಿ ವಾಸಿಸುವ ಯಾದವ್ ಆ ಸಮಯದಲ್ಲಿ ಮನೆಯಲ್ಲಿ ಇರಲಿಲ್ಲ. ದಾಳಿ ನಡೆದಾಗ ಅವರ ಉಸ್ತುವಾರಿ ಮತ್ತು ಕೆಲವು ಕುಟುಂಬ ಸದಸ್ಯರು ಒಳಗೆ ಇದ್ದರು, ಆದರೆ ಯಾವುದೇ ಗಾಯಗಳಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುರುಗ್ರಾಮದ ಸೆಕ್ಟರ್ 57 ರಲ್ಲಿರುವ ಯೂಟ್ಯೂಬರ್ ಮತ್ತು ಬಿಗ್ ಬಾಸ್ ಒಟಿಟಿ ವಿಜೇತ ಎಲ್ವಿಶ್ ಯಾದವ್ ಅವರ ನಿವಾಸದ ಹೊರಗೆ ಮೂವರು ಮುಸುಕುಧಾರಿ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಈ ಘಟನೆ ಬೆಳಿಗ್ಗೆ 5:30 ರ ಸುಮಾರಿಗೆ ನಡೆದಿದೆ. ಒಂದು ಡಜನ್‌ಗೂ ಹೆಚ್ಚು ಸುತ್ತು ಗುಂಡು ಹಾರಿಸಲಾಗಿದೆ. ಗುಂಡು ಹಾರಿಸಿದ ಸಮಯದಲ್ಲಿ ಎಲ್ವಿಶ್ ಯಾದವ್ ಅವರ ಮನೆಯಲ್ಲಿ ಇರಲಿಲ್ಲ ಎಂದು ಗುರುಗ್ರಾಮ್ ಪೊಲೀಸ್ ಪಿಆರ್‌ಒ ಸಂದೀಪ್ ಕುಮಾರ್ ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ವಿಧಿವಿಜ್ಞಾನ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ ಮತ್ತು ಪ್ರದೇಶದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲು ಪ್ರಾರಂಭಿಸಿದ್ದಾರೆ. ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಕುಟುಂಬದಿಂದ ಔಪಚಾರಿಕ ದೂರು ದಾಖಲಾಗಿದ ನಂತರ ಹೆಚ್ಚಿನ ತನಿಖೆ ನಡೆಸಲಾಗುವುದು. ಘಟನೆಗೆ ಮೊದಲು ಅವರಿಗೆ ಯಾವುದೇ ಬೆದರಿಕೆ ಬಂದಿರಲಿಲ್ಲ. ಯೂಟ್ಯೂಬರ್ ಪ್ರಸ್ತುತ ಹರಿಯಾಣದ ಹೊರಗೆ ಇದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular