ಬೆಂಗಳೂರು: ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ರೈಲ್ವೆ ಗೊಲ್ಲಹಳ್ಳಿಯಲ್ಲಿ ಶನಿವಾರ ನಡೆದಿದೆ.
44 ವರ್ಷದ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡವರು. ಅನೇಕ ವರ್ಷಗಳಿಂದ ಮದುವೆಯಾಗಲು ಪ್ರಯತ್ನಿಸಿದರೂ ಅವರಿಗೆ ಹೆಣ್ಣು ಸಿಕ್ಕಿರಲಿಲ್ಲ. ಹೆಣ್ಣು ಕೇಳಲು ಹೋದಾಗ ವಿದ್ಯಾರ್ಹತೆ, ಉದ್ಯೋಗ, ಸ್ವಂತ ಮನೆಯ ಬಗ್ಗೆ ಪ್ರಶ್ನಿಸುತ್ತಿದ್ದರು. ಆಪ್ತರು ಮದುವೆ ಯಾವಾಗ ಎಂದು ಕೇಳುತ್ತಿದ್ದರು. ವಯಸ್ಸು ಮೀರಿದಂತೆ ಮದುವೆಯಾಗಲ್ಲ ಎಂದು ಮಾನಸಿಕ ಒತ್ತಡಕ್ಕೆ ಒಳಗಾದ ಮಂಜುನಾಥ್ ಶನಿವಾರ ಶೆಡ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
You Might Also Like
TAGGED:ಮದುವೆ