ಬಳ್ಳಾರಿ: ಕೆ.ಎಸ್.ಆರ್.ಟಿ.ಸಿ ಬಸ್ ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ಈ ದುರಂತ ಸಂಭವಿಸಿದೆ. ಮಂಡ್ಯ ಮೂಲದ ಶ್ವೇತಾ (38), ಕನಕಪುರ ಬಾಲನಾಯಕ (42) ಮೃತ ದುರ್ದೈವಿಗಳು.
ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ 10 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಿರಗುಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬಳ್ಳಾರಿ ಎಸ್ ಪಿ ಶೋಭಾ ರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.