ಹಾಸನ: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹಾಸನ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಸಾಲು ಸಾಲು ಅವಾಂತರ ಸೃಷ್ಟಿಯಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಏಳು ಕಿ.ಮೀ ವ್ಯಾಪ್ತಿಯಲ್ಲಿ 15 ಕಡೆ ಭೂಕುಸಿತವುಂಟಾಗಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರ ಸ್ಥಗಿತಗೊಂಡಿದೆ.
ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಪ್ರಯಾಣಿಕರ ಹಾಗೂ ಸರಕು ರೈಲುಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಹಲವೆಡೆ ರೈಲು ಹಳಿಗಳ ಮೇಲೆ ಮಣ್ಣು ಕುಸಿದು ಬಿದ್ದಿದೆ. ಇನ್ನು ಹಲವೆಡೆ ರೈಲು ಹಳಿಗಳು ಜಲಾವೃತಗೊಂಡಿವೆ.
ಇನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಮರ, ಗಿಡಗಳು, ಮಣ್ಣು ರಸ್ತೆಯ ಮೇಲೆ ಬಿದ್ದಿವೆ. ಇದರಿಂದಾಗಿ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಅಸ್ತವ್ಯಸ್ಥವಾಗಿದ್ದು, ಕಿಲೋಮೀಟರ್ ಗಟ್ಟಲೇ ಎರಡೂ ಬದಿ ಟ್ರಾಫಿಕ್ ಜಾಮ್ ಆಗಿದೆ.