ಹಾಸನ: ಸ್ವಾತಂತ್ರ್ಯ ದಿನಾಚರಣೆಯ ದಿನವೇ ಅಂಚೆ ಕಚೇರಿಯಲ್ಲಿ ಭರ್ಜರಿ ಬಾಡೂಟ ಮಾಡಿ ನೌಕರರು ಡಿಜೆ ಸಾಂಗ್ ಗೆ ಭರ್ಜರಿಸ್ಟೆಪ್ ಹಾಕಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಅಂಚೆ ಕಚೇರಿಯಲ್ಲಿ ಘಟನೆ ನಡೆದಿದ್ದು, ಸಾರ್ವಜನಿಕ ವಲಯದಿಂದ ವಿರೋಧ ವ್ಯಕ್ತವಾಗಿದೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಅಂಚೆ ಕಚೇರಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಅಂಚೆ ಕಚೇರಿಯ ನೌಕರರು ಮತ್ತು ಸಿಬ್ಬಂದಿ ಕಚೇರಿಯೊಳಗೆ ನಾನ್ವೆಜ್ ಅಡುಗೆ ತಯಾರಿಸಿ ಪಾರ್ಟಿ ಮಾಡಿ ಊಟ ಮಾಡಿದ್ದಾರೆ. ನಂತರ ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಈ ಬಗ್ಗೆ ರೀಲ್ಸ್ ಮಾಡಿದ್ದು, ವಿಡಿಯೋ ವೈರಲ್ ಆಗಿದ್ದು, ಅಂಚೆ ಕಚೇರಿ ಸಿಬ್ಬಂದಿ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ.