ಶ್ರೀನಗರ: ಜಮ್ಮು-ಕಾಶ್ಮೀರದ ಕಥುವದಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟದಲ್ಲಿ ಈವರೆಗೆ 7 ಜನರು ಮೃತಪಟ್ಟಿದ್ದಾರೆ. 6 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಥುವಾದ ರಾಜ್ ಬಾಗ್ ಪ್ರದೇಶದ ಘಾಟಿ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದೆ. ಮನೆಗಳು ಕುಸಿದು ಬಿದ್ದಿವೆ. ಗ್ರಾಮಕ್ಕೆ ಸಂಪರ್ಕ ಮಾರ್ಗವೇ ಸಂಪೂರ್ಣವಾಗಿ ಕಡಿತಗೊಂಡಿದೆ. ಹಲವರು ನಾಪತ್ತೆಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ. ಈವರೆಗೆ ೭ ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ. ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಕಥುವಾದ ಬಾಗರ್ದ್, ಚಾಂಗ್ಡಾ ಗ್ರಾಮ, ದಿಲ್ವಾನ್ ಹಟ್ಲಿ ಪ್ರದೇಶಗಳಲ್ಲಿ ಭೂಕುಸಿತವಾಗಿದೆ.