ರಸ್ತೆ ವಿಭಜಕಕ್ಕೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಬಸವಾಪಟ್ಟಣದ ಸಮೀಪ ನಡೆದಿದೆ.
ಕಾರ್ ನಲ್ಲಿದ್ದ ದರ್ಶನ್(25), ರಂಗನಾಥ ಪ್ರಸಾದ್(22) ಮೃತಪಟ್ಟವರು ಎಂದು ಗುರುತಿಸಲಾಗಿದೆ, ಬಸವಾಪಟ್ಟಣ ಸಮೀಪ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಕಾರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಕಾರ್ ನಲ್ಲಿ ಮೈಸೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, ಘಟನಾ ಸ್ಥಳದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಕೊಣನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.