ಚಾಮರಾಜನಗರ: ಪ್ರೀತಿಸುವಂತೆ ಪದವಿ ವಿದ್ಯಾರ್ಥಿನಿ ಹಿಂದೆ ಬಿದ್ದ ಯುವಕನೊಬ್ಬ, ಆಕೆಯ ಎದುರೇ ಎದೆಗೆ ಚಾಕು ಇರಿದುಕೊಂಡು ಹುಚ್ಚಾಟ ಮೆರೆದಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರದ ಬಸ್ ನಿಲ್ದಾಣದಲ್ಲಿ ಪ್ರದೀಪ್ ಎಂಬಾತ ವಿದ್ಯಾರ್ಥಿನಿ ಎದುರೇ ಎದೆಗೆ ಚಾಕು ಇರಿದುಕೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಆತನನ್ನು ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರದೀಪ್ ಚಾಮರಾಜನಗರ ತಾಲೂಕಿನ ಸಾಣೇಗಾಲ ಗ್ರಾಮದ ನಿವಾಸಿ. ವಿದ್ಯಾರ್ಥಿನಿ ಪೋಷಕರ ದೂರಿನ ಮೇರೆಗೆ ಚಾಮರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.