ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾರಿಗೆ ಅನ್ಯಕೋಮಿನ ಯುವಕರು ಮುತ್ತಿಗೆ ಹಾಕಿರುವ ಘಟನೆ ವಿಜಯಪುರದ ಅಲಮೇಲ ಪಟ್ಟಣದಲ್ಲಿ ನಡೆದಿದೆ.
ಅಲಮೇಲ ಪಟ್ಟಣದ ಮಾರ್ಗವಾಗಿ ಶಾಸಕ ಯತ್ನಾಳ್ ಕಾರಿನಲ್ಲಿ ಸಾಗುತ್ತಿದ್ದ ವೇಳೆ ಏಕಾಏಕಿ ಅನ್ಯಕೋಮಿನ ಯುವಕರ ಗುಂಪು ಕಾರನ್ನು ಅಡ್ಡಗಟ್ಟಿ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ ಕಪ್ಪು ಬಟ್ಟೆ ಪ್ರದರ್ಶನ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಯುವಕರನ್ನು ತಡೆದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಶಾಸಕ ಯತ್ನಾಳ್ ಕೆಲ ದಿನಗಳ ಹಿಂದೆ ಅನ್ಯಕೋಮಿನ ಯುವತಿಯರನ್ನು ಪ್ರೀತಿಸಿ ಮದುವೆಯಾದರೆ 5 ಲಕ್ಷ ನೀಡುವುದಾಗಿ ಘೋಷಿಸಿದ್ದರು. ಶಾಸಕರ ಈ ಹೇಳಿತೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಇದರಿಂದ ರೊಚ್ಚಿಗೆದ್ದಿರುವ ಅನ್ಯಕೋಮಿನ ಯುವಕರು ಶಾಕರ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.