ಬೆಂಗಳೂರು: ರಾಜ್ಯದ 36 ಸಾವಿರ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ತಟ್ಟೆ ಅಥವಾ ಬೌಲ್ ನಲ್ಲಿ ಪ್ರಸಾದ ನೀಡುವಂತಿಲ್ಲ. ಪ್ಲಾಸ್ಟಿಕ್ ಲೋಟ ಕೂಡ ಬಳಸಿದಂತೆ ಸರ್ಕಾರ ಆದೇಶಿಸಿದೆ.
ಆಗಸ್ಟ್ 15 ರಿಂದಲೇ ಪ್ಲಾಸ್ಟಿಕ್ ಬಳಕೆಗೆ ಸರ್ಕಾರ ನಿಷೇಧ ಹೇರಿದ್ದು, ಇಂದು ಅಧಿಕೃತವಾಗಿ ರಾಜ್ಯಾದ್ಯಂತ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
ಪರಿಸರ, ಆರೋಗ್ಯಕ್ಕೆ ಮಾರಕವಾಗುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಇಂದು ಅಭಿಯಾನಕ್ಕೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ.
ಬೆಂಗಳೂರು ಗವಿಪುರಂನಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.