HomeLatest Newsರಾಜ್ಯದ ಹಲವೆಡೆ ನಾಳೆ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ನಾಳೆ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು ರಾಜ್ಯದ ವಿವಿಧೆಡೆ ಬಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಕಡೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆಗಸ್ಟ್ 18ರಂದು ಈ ಜಿಲ್ಲೆಗಳ ಶಾಲೆಗಳಿಗೆ ರಜೆ ನೀಡಲಾಗಿದೆ.

ಉತ್ತರ ಕನ್ನಡ

ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ 10 ತಾಲೂಕುಗಳಲ್ಲಿ ನಾಳೆ ರಜೆ ನೀಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪಿಯು ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ. ಶಿರಸಿ. ಸಿದ್ದಾಪುರ. ಯಲ್ಲಾಪುರ, ದಾಂಡೇಲಿ. ಜೋಯಿಡಾ ತಾಲೂಕುಗಳಲ್ಲಿ ನಾಳೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ರಜೆ ಘೋಷಿಸಿ ಆದೇಶಿಸಿದ್ದಾರೆ. ಮುಂಡಗೋಡ, ಹಳಿಯಾಳ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಇರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಮಗಳೂರು

ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್. ಪುರ ತಾಲೂಕುಗಳಲ್ಲಿ ತೀವ್ರವಾಗಿ ಮಳೆಯಾಗುತ್ತಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಆಗಸ್ಟ್ 18ರಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷ್ಠಿಸಲಾಗಿದ್ದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಕೊಡಗು

ಕೊಡಗು ಜಿಲ್ಲೆಯಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆ ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜೋರು ಗಾಳಿ ಮಳೆಯಾಗುವ ಹಿನ್ನೆಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶಿಸಿದ್ದಾರೆ.

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ಸಾಗರ, ಹೊಸನಗರ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಅಂಗನವಾಡಿ, ಶಾಲೆಗಳು, ಪಿಯು ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಸಾಗರ, ಹೊಸನಗರ ತಹಶೀಲ್ದಾರ್ ಗಳು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular