HomeLatest Newsರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್

ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ದಕ್ಷಿಣ ಒಳನಾಡು ಮತ್ತು ಕಲ್ಯಾಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿಯೂ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಆಗಸ್ಟ್ 18, 19ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣಕನ್ನಡ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಒಳನಾಡಿನ ಬೆಳಗಾವಿ, ಹಾವೇರಿ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಆಗಸ್ಟ್ 18ರಂದು ಮೈಸೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ. ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular