HomeLatest NewsRain alert Karnataka : ರಾಜ್ಯದಲ್ಲಿ ಮುಂದಿನ 2 ದಿನ ಭಾರಿ 'ಮಳೆ' ಮುನ್ಸೂಚನೆ :...

Rain alert Karnataka : ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ‘ಮಳೆ’ ಮುನ್ಸೂಚನೆ : 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು : ವಾಯುಭಾರ ಕುಸಿತ ಉಂಟಾದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, 2 ದಿನ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೂ ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಯಾದಗಿರಿ, ಬೀದರ್, ಗದಗ , ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪ , ಎನ್ ಆರ್ ಪುರದಲ್ಲಿ ಭಾರಿ ಮಳೆಯಾಗುತ್ತಿದೆ. ಶೃಂಗೇರಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಶಾರದಾ ಮಠದ ಗಾಂಧಿ ಮೈದಾನದ ಪಾರ್ಕಿಂಗ್ ಪ್ರದೇಶ, ಹಾಗೂ ಕಾಂಕ್ರೀಟ್ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಗುಂಡಿಮಯ ರಸ್ತೆಗಳು ಜಲಾವೃತಗೊಂಡಿದ್ದು ಅವಾಂತರ ಸೃಷ್ಟಿಯಾಗಿವೆ. ಮೆಜೆಸ್ಟಿಕ್, ವಿಧಾನಸೌಧ, ಶಾಂತಿ ನಗರ, ಕೆ.ಆರ್. ಮಾರುಕಟ್ಟೆ, ರಿಚ್ಮಂಡ್ ವೃತ್ತ, ಎಂ.ಜಿ.ರೋಡ್, ಕಸ್ತೂರಬಾ ರಸ್ತೆ, ರಾಜಾಜಿನಗರ, ಮಲ್ಲೇಶ್ವರಂ, ವಿಜಯನಗರ, ಗಿರಿನಗರ, ಆರ್.ಆರ್.ನಗರ, ಮೈಸೂರು ರಸ್ತೆ, ನಯಂಡಹಳ್ಳಿ, ಕೆಂಗೇರಿ ಸೇರಿದಂತೆ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ಅವಾಂತರದ ನಡುವೆ ಹಲವೆಡೆ ವಿದ್ಯುತ್ ವ್ಯತ್ಯಯವುಂಟಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular