GOOD NEWS: 545 ಪಿಎಸ್ಐಗಳ ನೇಮಕಾತಿ: ಗೃಹಸಚಿವ ಪರಮೇಶ್ವರ್ ಮಾಹಿತಿ

ಚಾಮರಾಜನಗರ: ಇನ್ನು 15 ದಿನದಲ್ಲಿ ಪಿಎಸ್ಐ ಹುದ್ದೆಗೆ ಆಯ್ಕೆಯಾದ 545 ಮಂದಿಗೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ 545 ಪಿಎಸ್ಐ ನೇಮಕಾತಿಯಲ್ಲಿ ಹಗರಣವಾಗಿತ್ತು. ಇದರಿಂದ ಐದಾರು ವರ್ಷಗಳಿಂದ ನೇಮಕಾತಿ ಸ್ಥಗಿತವಾದ ಕಾರಣ ಸಾವಿರಾರು ಹುದ್ದೆಗಳು ಖಾಲಿ ಉಳಿದಿವೆ. ಈಗ ಆದೇಶ ನೀಡಿದ 545 ಮಂದಿ ತರಬೇತಿಯಲ್ಲಿದ್ದಾರೆ. 402 ಮಂದಿಗೆ ಮೆಡಿಕಲ್ ಟೆಸ್ಟ್ ನಡೆಯುತ್ತಿದ್ದು, 15 ದಿನದಲ್ಲಿ ನೇಮಕಾತಿ ಆದೇಶ ನೀಡಲಾಗುವುದು. ಇವುಗಳ ಜೊತೆಗೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ವರದಿ ಬಂದಿದ್ದು, ಆಗಸ್ಟ್ 19 ರಂದು ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read