BIG NEWS: ಬೆಂಗಳೂರಿನ ಅವೈಜ್ಞಾನಿಕ, ದುರ್ಬಲ ಕಟ್ಟಡಗಳ ಮಾಲೀಕರಿಗೆ ನೋಟಿಸ್: ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ಬೆಂಗಳೂರಿನ ಅವೈಜ್ಞಾನಿಕ, ದುರ್ಬಲ ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳುರಿನ ನಗರ್ತಪೇಟೆಯಲಿ ಬೆಂಕಿ ಅವಘಡದಿಂದ ಹಾನಿಗೊಳಗಾಗಿರುವ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾತನಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಅವೈಜ್ಞಾನಿಕವಾಗಿ ನಿರ್ಮಿಸಿರುವ ದುರ್ಬಲ ಕಟ್ಟಡಗಳನ್ನು ಭದ್ರಗೊಳಿಸುವ ಕೆಲಸ ಮೊದಲು ಆಗಬೇಕು. ಎರಡು ಮೂರು ಮಹಡಿಗಳನ್ನು ನಿರ್ಮಿಸಲು ಅನುಮತಿ ಪಡೆದು 8-10 ಮಹಡಿ ನಿರ್ಮಾಣ ಮಾಡಲಾಗಿದೆ. ಹಲವು ಕಟ್ಟಡಗಳು ವಾಸಕ್ಕೆ ಯೋಗ್ಯವಲ್ಲ. ಒಳಗೆ ಬಂದು ನೋಡಿದಾಗ ಗಾಬರಿಯಾಯಿತು. ಇಂತಹ ಇಕ್ಕಟ್ಟಿನ ಜಾಗದಲ್ಲಿ ಬೆಂಕಿ ಅವಘಡ ಸಂಭವಿಸಿದರೆ ಜನರು ಓಡಲಾರಂಭಿಸುತ್ತಾರೆ. ಆಗ ಕಾಲ್ತುಳಿತವಾಗುವ ಸಾಧ್ಯತೆ ಇರುತ್ತದೆ. ದೆಹಲಿ, ಮುಂಬೈನಲ್ಲಿಯೂ ಇದೇ ಸ್ಥಿತಿ ಇದೆ ಎಂದರು.

ಇಂತಹ ಕಟ್ಟಡಗಳನ್ನು ಕೆದವಲು ಹೋಗಲ್ಲ ದುರಸ್ತಿ ಮಾಡಿಸಿ ಸುಸ್ಥಿತಿಯಲ್ಲಿ ಇಟ್ಟುಕೊಳ್ಲುವಂತೆ ಮಾಲೀಕರಿಗೆ ಸೂಚಿಸಲಾಗುವುದು. ಎಲ್ಲಾ ಕಟ್ಟಡಗಳನ್ನು ಸಮೀಕ್ಷೆ ನಡೆಸಲಾಗುವುದು. ನಿಯಮ ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read