BREAKING : ಹೆಬ್ಬಾಳದ ಹೊಸ ‘ಫ್ಲೈಓವರ್’ ಮೇಲೆ ಬೈಕ್ ಸವಾರಿ ಮಾಡಿದ DCM ಡಿ.ಕೆ ಶಿವಕುಮಾರ್ : ವೀಡಿಯೋ ವೈರಲ್ |WATCH VIDEO

ಬೆಂಗಳೂರು : ಹೆಬ್ಬಾಳದ ಹೊಸ ಫ್ಲೈಓವರ್ ಮೇಲೆ ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಬೈಕ್ ಓಡಿಸಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.

ಹೆಬ್ಬಾಳದ ಹೊಸ ಫ್ಲೈಓವರ್ ಲೋಕಾರ್ಪಣೆಗೊಳಿಸಿದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಬೈಕ್ ಓಡಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿಗೆ ಹಸಿರು ಬಾವುಟ ತೋರಿಸುವ ಮೂಲಕ ಸಾಥ್ ನೀಡಿದರು.
ಬೆಂಗಳೂರಿನಲ್ಲಿ ಹೊಸದಾಗಿ ಉದ್ಘಾಟನೆಗೊಂಡ ಹೆಬ್ಬಾಳ ಮೇಲ್ಸೇತುವೆಯ ಮೇಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೋಟಾರ್ ಸೈಕಲ್ ಸವಾರಿ ಸಿಎಂ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಿದರು.

ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್‌.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಮೇಲ್ಸೇತುವೆಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಲೋಕಾರ್ಪಣೆಗೊಳಿಸಲಾಯಿತು.

ಇಂದಿನಿಂದ ಹೆಬ್ಬಾಳದ ಹೊಸ ಮೇಲ್ಸೇತುವೆ ರ‍್ಯಾಂಪ್ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. 80 ಕೋಟಿ ರೂ. ವೆಚ್ಚದಲ್ಲಿ 700 ಮೀಟರ್ ಉದ್ದದ ಹೆಬ್ಬಾಳ ಫ್ಲೈಓವರ್ ನಿರ್ಮಾಣದಿಂದ ಹೆಬ್ಬಾಳದ ಟ್ರಾಫಿಕ್ ದಟ್ಟಣೆ ಶೇಕಡಾ 30ರಷ್ಟು ನಿವಾರಣೆಯಾಗುವ ನಿರೀಕ್ಷೆ ಇದೆ. ಹೆಬ್ಬಾಳ ಮೇಲ್ಸೇತುವೆಯಲ್ಲಿ ನನ್ನ ಯೆಜ್ಡಿ ರೋಡ್‌ಕಿಂಗ್‌ ಬೈಕ್ ಸವಾರಿ ಮಾಡುವ ಮೂಲಕ ಕಾಲೇಜು ದಿನಗಳನ್ನು ಮೆಲುಕು ಹಾಕಿದೆ. ಬೆಂಗಳೂರಿನ ನಾಗರಿಕರೇ, ಜಾಗತಿಕವಾಗಿ ಗುರುತಿಸಿಕೊಂಡಿರುವ ನಮ್ಮ ಬೆಂಗಳೂರು ನಗರಕ್ಕೆ ಹೊಸರೂಪವನ್ನು ನೀಡಲು ನಾವು ಬದ್ಧರಿದ್ದೇವೆ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read