ಬೆಂಗಳೂರು: ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರದ ಬಗ್ಗೆ ಕಡಿವಾಣ ಹಾಕಲು ಸರ್ಕಾರ ಯಾಕೆ ಇನ್ನೂ ಮುಂದಾಗಿಲ್ಲ? ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಉತ್ತರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ. ಸಂದರ್ಭ ಬಂದಾಗ ಮಾತನಾಡುತ್ತೇನೆ ಎಂದು ಸ್ವತಃ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಡಿ.ಕೆ.ಶಿವಕುಮಾರ್ ಅವರಿಗೆ ಷಡ್ಯಂತ್ರ ಬಹಿರಂಗ ಪಡಿಸಲು ಇನ್ನೂ ಯಾವ ಸಂದರ್ಭ ಬರಬೇಕು? ಎಂದು ಪ್ರಶ್ನಿಸಿದರು.
ಅಪಪ್ರಾಚಾರ ತಡೆಗಟ್ಟಲು ಸರ್ಕಾರ ಯಾಕೆ ಪ್ರಯತ್ನ ಮಾಡುತ್ತಿಲ್ಲ? ಎಸ್ ಐಟಿ ತನಿಖೆಯ ಮಧ್ಯಂತರ ವರದಿ ಬಿಡುಗಡೆ ಮಾಡಲಿ. ಗೃಹ ಸಚಿವ ಪರಮೇಶ್ವರ್ ಸಮರ್ಪಕ ಉತ್ತರ ನೀಡಲಿ ಎಂದು ಒತ್ತಾಯಿಸಿದರು.