ಬೆಂಗಳೂರು: ನಟಿ ರಮ್ಯಾ ಅವರಿಗೆ ಅಶ್ಲೀಲ ಸಂದೇಶ ಕಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಇದುವರೆಗೆ 9 ಮಂದಿಯನ್ನು ಪೊಲೀಸರು ಪ್ರಕರಣದಲ್ಲಿ ಬಂಧಿಸಿದ್ದಾರೆ. ಉಡುಪಿ ಮೂಲದ ಸುಜನ್ ಮತ್ತು ಆದರ್ಶ ಬಂಧಿತ ಆರೋಪಿಗಳು. ಈ ಮೊದಲು ಮಂಜುನಾಥ, ಭುವನ್ ಗೌಡ, ಪವನ್, ಓಬಣ್ಣ, ಗಂಗಾಧರ ಸೇರಿ ಹಲವರನ್ನು ಬಂಧಿಸಲಾಗಿತ್ತು.
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ವಿಚಾರವಾಗಿ ಸುಪ್ರೀಂಕೋರ್ಟ್ ಅಭಿಪ್ರಾಯ ಹಂಚಿಕೊಂಡಿದ್ದಕ್ಕೆ ದರ್ಶನ್ ಅಭಿಮಾನಿಗಳು ರಮ್ಯಾ ಅವರಿಗೆ ಅಶ್ಲೀಲ ಸಂದೇಶ ಕಳಿಸಿದ್ದರು. 43 ಅಕೌಂಟ್ ಗಳ ವಿರುದ್ಧ ರಮ್ಯಾ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದುವರೆಗೆ 9 ಆರೋಪಿಗಳನ್ನು ಬಂಧಿಸಿದ್ದಾರೆ.