ಹಾಸನ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಮತ್ತು ಮೆಡಿ ಸೇವ್ ಹೆಲ್ತ್ ಎಂಡ್ ಲೈಫ್ ಸ್ಟೈಲ್ ಪ್ರೈವೆಟ್ ಲಿಮಿಟೆಡ್(Medisave Health And Lifestyle Private Limited) ಹಾಗೂ ಬೆಲ್‌ಸ್ಟಾರ್ ಮೈಕ್ರೋಫೈನಾನ್ಸ್ ಲಿಮಿಟೆಡ್(Belstar Microfinance Limited) ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ನೀಡುವ ಸಂಬಂಧ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರೈಲ್ವೇ ಸ್ಟೇಷನ್ ಹತ್ತಿರ, ಸರ್ಕಾರಿ ಐ.ಟಿ.ಐ. ಕಾಲೇಜು ಆವರಣದಲ್ಲಿ ಆ.22 ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನ ನಡೆಯಲಿದೆ.
ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೊಮಾ, ಪಿಯುಸಿ, ಯಾವುದೇ ಪದವಿ ಪಾಸಾದ ಪುರುಷ/ಮಹಿಳಾ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೊಗಾಧಿಕಾರಿಗಳು ತಿಳಿಸಿದ್ದಾರೆ.
ದೂರವಾಣಿ ಸಂಖ್ಯೆ: 08172-296374, 9743144950 ಹಾಗೂ 8722606874 ರವರನ್ನು ಕಚೇರಿ ವೇಳೆಯಲ್ಲಿ ಮಾತ್ರ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.