HomeLatest NewsBIG NEWS : 'ವ್ಯಾಜ್ಯ' ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಸೆ.13 ರಂದು 'ರಾಷ್ಟ್ರೀಯ ಲೋಕ್...

BIG NEWS : ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಸೆ.13 ರಂದು ‘ರಾಷ್ಟ್ರೀಯ ಲೋಕ್ ಅದಾಲತ್’

ರಾಷ್ಟ್ರೀಯ   ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಸೆಪ್ಟೆಂಬರ್ 13 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಸಲಾಗುವುದು.

ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ. ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು.

*ವಿಶೇಷ ಸೂಚನೆ:*

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿದಿನ ಎಲ್ಲಾ ನ್ಯಾಯಾಲಯಗಳಲ್ಲಿ ಮೆಗಾ-ಲೋಕ್ ಅದಾಲತ್ ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‌ಗಳು ನಡೆಯುತ್ತಲಿರುತ್ತವೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ದೂ.08392-278077 ಹಾಗೂ ಎನ್‌ಎಎಲ್‌ಎಸ್‌ಎ ಸಹಾಯವಾಣಿ ಸಂಖ್ಯೆ 15100 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular