ಬೆಂಗಳೂರು : ಈ ವರ್ಷದಿಂದ ರಾಜ್ಯಾದ್ಯಂತ ಪುನೀತ್’ ರಾಜ್ ಕುಮಾರ್ ಹೃದಯಜ್ಯೋತಿ ಯೋಜನೆ ವಿಸ್ತರಣೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಸಭೆಯಲ್ಲಿ ಪರಿಷತ್ ಸದಸ್ಯ ಧನಂಜಯ್ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ರಾಜ್ಯದ 86 ಸರ್ಕಾರಿ ಆಸ್ಪತ್ರೆಗಳಲ್ಲಿ ಹಠಾತ್ ಹೃದಯಾಘಾತಗಳನು ತಡೆಯಲು ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದರು.
ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಹೃದಯಜ್ಯೋತಿ ಯೋಜನೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೃದಯ ಜ್ಯೋತಿ ಯೋಜನೆ ಸಾವಿರಾರು ಜನರ ಜೀವ ಉಳಿಸುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾಗಿಲ್ಲ. ಜನರು ಭಯಭೀತರಾಗುವ ಅಗತ್ಯವಿಲ್ಲ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿ ಹೇಳಿದರು.
ಈ ವರ್ಷದಿಂದ ಹೃದಯಜ್ಯೋತಿ ಯೋಜನೆ ರಾಜ್ಯಾದ್ಯಂತ ವಿಸ್ತರಣೆ
— DIPR Karnataka (@KarnatakaVarthe) August 18, 2025
– @dineshgrao, ಆರೋಗ್ಯ ಸಚಿವರು pic.twitter.com/4JJslhjs9i
ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾಗಿಲ್ಲ.
— DIPR Karnataka (@KarnatakaVarthe) August 18, 2025
ಜನರು ಭಯಭೀತರಾಗುವ ಅಗತ್ಯವಿಲ್ಲ.
– @S_PrakashPatil , ವೈದ್ಯಕೀಯ ಶಿಕ್ಷಣ ಸಚಿವರು pic.twitter.com/gJyq8HGGg3