ಬೆಂಗಳೂರು: ಸಂಭವನೀಯ ಹೃದಯಾಘಾತ ಪತ್ತೆ ಹಚ್ಚಲು ರಾಜ್ಯದ ಎಲ್ಲಾ ತಾಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಡಾ. ಧನಂಜಯ ಸರ್ಜಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಗೃಹ ಆರೋಗ್ಯ ಯೋಜನೆ ಮೂಲಕ ಅಸಾಂಕ್ರಾಮಿಕ ರೋಗ ಪತ್ತೆ ಮತ್ತು ಹೃದಯಾಘಾತಕ್ಕೆ ಕಾರಣವಾದ ಅಂಶಗಳ ಪತ್ತೆಗೆ 30 ವರ್ಷ ಮೇಲ್ಪಟ್ಟವರಿಗೆ ತಪಾಸಣೆ ಮಾಡಲು ಕ್ರಮ ವಹಿಸಲಾಗಿದೆ. ಅತ್ಯಾಧುನಿಕವಾದ ಕ್ಯಾತ್ ಲ್ಯಾಬ್ ವ್ಯವಸ್ಥೆಯನ್ನು ಮಂಗಳೂರು, ಬೆಂಗಳೂರಿನ ಸಿವಿ ರಾಮನ್ ನಗರ ಮತ್ತು ಹೊಸಪೇಟೆಯಲ್ಲಿ ಕಲ್ಪಿಸಲು ಉದ್ದೇಶಿಸಲಾಗಿದೆ. ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ತಾಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕ್ಷೇಂದ್ರಗಳಿಗೆ ವಿಸ್ತರಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ.
ತೀವ್ರ ಹೃದಯಾಘಾತ ಸಂಭವಿಸಿದಾಗ ಕರೋನರಿ ಸ್ಟಂಟ್ ಮತ್ತು ಕಾರ್ಡಿಯಾಕ್ ಬೈಪಾಸ್ ಸರ್ಜರಿ ಗಳಿಗೆ ಸೂಪರ್ ಸ್ಪೆಷಾಲಿಟಿ ತಜ್ಞರ ಅವಶ್ಯಕತೆ ಇದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಣಿ ಹೊಂದಿರುವ ತೃತೀಯ ಹಂತದ ಆಸ್ಪತ್ರೆಗಳಿಗೆ ಕಳುಹಿಸಿ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಈ ವರ್ಷದಿಂದ ಹೃದಯಜ್ಯೋತಿ ಯೋಜನೆ ರಾಜ್ಯಾದ್ಯಂತ ವಿಸ್ತರಣೆ
— DIPR Karnataka (@KarnatakaVarthe) August 18, 2025
– @dineshgrao, ಆರೋಗ್ಯ ಸಚಿವರು pic.twitter.com/4JJslhjs9i