ದಾವಣಗೆರೆ: ದಾವಣಗೆರೆಯಲ್ಲಿ ಜಿಲ್ಲೆ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಗ್ರಾಮ ಪಂಚಾಯಿತಿ ಪಿಡಿಒ ಶಶಿಧರ್ ಪಾಟೀಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಇ-ಸ್ವತ್ತು ಮತ್ತು ಖಾತೆ ಬದಲಾವಣೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಸೂರಗೊಂಡನಹಳ್ಳಿ ಗ್ರಾಮದ ಅಶೋಕ್ ತಮ್ಮ 3 ಮನೆಗಳ ಇ-ಸ್ವತ್ತು ಮತ್ತು ಖಾತೆ ಬದಲಾವಣೆಗಾಗಿ ಪಲ್ಲಾಗಟ್ಟೆ ಗ್ರಾಮ ಪಂಚಾಯಿತಿಗೆ ಅರ್ಜಿಲ್ಲಿಸಿದ್ದು, ಇ-ಸ್ವತ್ತು ಕೊಡದೇ ಪಿಡಿಒ ಸತಾಯಿಸುತ್ತಿದ್ದರು. 10 ಸಾವಿರ ರೂಪಾಯಿ ಲಂಚ ಕೇಳಿದ್ದರು.
ಸೋಮವಾರ ಲಂಚ ಸ್ವೀಕರಿಸುವಾಗ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ಕೌಲಾಪುರೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಲಂಚದ ಹಣದ ಸಮೇತ ಪಿಡಿಒ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.