ಮೈಸೂರು: ಮದ್ಯದ ಅಮಲಿನಲ್ಲಿ ಪಬ್ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದ ಆರೋಪದಡಿ ಸಿಸಿಬಿ ಇನ್ಸ್ಪೆಕ್ಟರ್ ಅಮಾನತು ಮಾಡಲಾಗಿದೆ.
ಮೈಸೂರು ನಗರ ಅಪರಾಧ ವಿಭಾಗದ ಇನ್ಸ್ಪೆಕ್ಟರ್ ಮೋಹನ್ ಕುಮಾರ್ ಅಮಾನತುಗೊಂಡವರು. ಭಾನುವಾರ ಕುಟುಂಬದವರು, ಸ್ನೇಹಿತರೊಂದಿಗೆ ಚಾಮುಂಡಿ ಬೆಟ್ಟ ತಪ್ಪಲಿನ ಜೆಸಿ ನಗರದ ಪಬ್ ಗೆ ತೆರಳಿದ್ದರು. ಮದ್ಯದ ಮಲಿನಲ್ಲಿ ಅವರು ನಾನು ಅಪ್ಪು ಅಭಿಮಾನಿ ಅಪ್ಪು ಸಿನಿಮಾ ಹಾಡು ಹಾಕಿ ಎಂದು ಹೇಳಿದ್ದಾರೆ. ಇದೇ ವಿಚಾರಕ್ಕೆ ಪಬ್ ಸಿಬ್ಬಂದಿ ಮತ್ತು ಮೋಹನ್ ಕುಮಾರ್ ನಡುವೆ ವಾಗ್ವಾದ ನಡೆದಿದ್ದು, ಕೋಪಗೊಂಡ ಮೋಹನ್ ಕುಮಾರ್ ಪಬ್ ಸಿಬ್ಬಂದಿಯೊಂದಿಗೆ ತಳ್ಳಾಟ ನೂಕಾಟ ನಡೆಸಿದ್ದಾರೆ. ಈ ದೃಶ್ಯಗಳು ಜಾಲತಾಣದಲ್ಲಿ ವೈರಲ್ ಆಗಿದ್ದವು.
ಸಾರ್ವಜನಿಕವಾಗಿ ಅನುಚಿತವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಮೋಹನ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.