BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು.!

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.

ಸಂಜಯನಗರದಲ್ಲಿ  ಈ ಘಟನೆ ನಡೆದಿದೆ. ಬಿಎಂಟಿಸಿ 8 ನೇ ಡಿಪೋಗೆ ಸೇರಿದ ಬಸ್ ಡಿಕ್ಕಿ ಹೊಡೆದಿದೆ.ರೋಶನ್ ಎಂಬ ವ್ಯಕ್ತಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದು , ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ವೈದ್ಯರು ಸವಾರ ಮೃತಪಟ್ಟಿರುವುದಾಗಿ  ಘೋಷಿಸಿದ್ದಾರೆ. ಮಗುವಿಗೆ ಉಪಹಾರ ತರಲು ಬೈ‍ಕ್ ನಲ್ಲಿ ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಕಳೆದ ಕೆಲವು ದಿನಗಳ  ಹಿಂದೆ ಪೀಣ್ಯದ 2 ನೇ ಹಂತದಲ್ಲಿ ರಸ್ತೆಬದಿಯಿದ್ದ ಕ್ಯಾಂಟೀನ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಯುವತಿ ಮೃತಪಟ್ಟು, ಐವರು ಗಾಯಗೊಂಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read