ಬೆಂಗಳೂರು : ಬೆಂಗಳೂರಿನ ನಿಗೂಢ ಸ್ಪೋಟದಲ್ಲಿ ಮೂವರು ಮೃತಪಟ್ಟ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ತನಿಖೆ ಬೆನ್ನತ್ತಿದ ಪೊಲೀಸರಿಗೆ ಘಟನೆಗೆ ಕಾರಣ ಏನೆಂಬುದು ಗೊತ್ತಾಗಿದೆ.
ಆಡುಗೋಡಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಕಾರಣ ಗೊತ್ತಾಗಿದೆ. ಮನೆಯಲ್ಲಿ ರಾತ್ರಿಯೆಲ್ಲಾ ಗ್ಯಾಸ್ ಸೋರಿಕೆಯಾಗಿತ್ತು, ಬೆಳಗ್ಗೆ ಮಗು ಟಿವಿ ಆನ್ ಮಾಡಿದಾಗ ಸ್ಪೋಟ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.
ಬೆಂಗಳೂರಿನ ಚಿನ್ನಯ್ಯಪಾಳ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ದಿನವೇ ಬೆಂಗಳೂರಿನಲ್ಲಿ ನಿಗೂಢ ಸ್ಪೋಟವೊಂದು ಸಂಭವಿಸಿತ್ತು, ನಿಗೂಢ ಸ್ಪೋಟಕ್ಕೆ 6-7 ಮನೆ ಛಿದ್ರ ಛಿದ್ರವಾಗಿದ್ದು, ಓರ್ವ ಬಾಲಕ ಸೇರಿ ಮೂರು ಮಂದಿ ಮೃತಪಟ್ಟಿದ್ದರು.
‘ನಿಗೂಢ ಸ್ಪೋಟ’ ಕೇಸ್ ಕೆದಕಲು ಪೊಲೀಸರು ಮುಂದಾಗಿದ್ದರು, ಸ್ಥಳದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದಲೂ ಶೋಧ ನಡೆಸಲಾಗಿತ್ತು. ಅಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಸ್ತೂರಿ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿತ್ತು.
You Might Also Like
TAGGED:ನಿಗೂಢ ಸ್ಪೋಟ