HomeLatest Newsರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲ ಜಿಲ್ಲೆಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್ ಆರಂಭ:...

ರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲ ಜಿಲ್ಲೆಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್ ಆರಂಭ: ಎಲ್ಲ ಆಸ್ಪತ್ರೆಗಳಲ್ಲೂ ಟೆಲಿ ಇಸಿಜಿ ವ್ಯವಸ್ಥೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ಜೊತೆ ಕಡ್ಡಾಯವಾಗಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ತೆರೆಯಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

 ಎಲ್ಲ ಜಿಲ್ಲೆಗಳಲ್ಲೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳ ಜೊತೆಗೆ ಟ್ರಾಮಾ ಕೇಂದ್ರಗಳನ್ನು ಪ್ರಾರಂಭಿಸಲಿದ್ದು, ಮುಂದಿನ ಐದು ವರ್ಷಗಳಲ್ಲಿ ಈ ಎಲ್ಲ ಆಸ್ಪತ್ರೆಗಳಲ್ಲೂ ಗುಣಮಟ್ಟದ ಸೇವೆ ಒದಗಿಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 ಹೃದಯಾಘಾತದ ಸಾವುಗಳ ತಡೆಗೆ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ ಕಲ್ಪಿಸಲಾಗುವುದು. ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆ, ಬೆಂಗಳೂರಿನ ಸರ್‌ ಸಿ.ವಿ.ರಾಮನ್‌ ನಗರ ಸಾರ್ವಜನಿಕ ಆಸ್ಪತ್ರೆ ಹಾಗೂ ಹೊಸಪೇಟೆ ಆಸ್ಪತ್ರೆಗಳಲ್ಲಿ ಹೃದಯ ರಕ್ತನಾಳಗಳ ಸಂಬಂಧಿತ ಚಿಕಿತ್ಸೆ ನೀಡುವ ಕ್ಯಾತ್‌ ಲ್ಯಾಬ್‌ ತೆರೆಯಲಾಗುವುದು. ಗೃಹ ಆರೋಗ್ಯ ಯೋಜನೆಯಡಿ 30 ವರ್ಷ ಮೇಲ್ಪಟ್ಟವರನ್ನು ತಪಾಸಣೆಗೆ ಒಳಪಡಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular