HomeKarnatakaBREAKING NEWS: ಎಡಗೈ ಶೇ.6, ಬಲಗೈ ಶೇ.6, ಇತರೆ ಶೇ.5ರಷ್ಟು ಒಳ ಮೀಸಲಾತಿ ಜಾರಿಗೆ ಸಂಪುಟ...

BREAKING NEWS: ಎಡಗೈ ಶೇ.6, ಬಲಗೈ ಶೇ.6, ಇತರೆ ಶೇ.5ರಷ್ಟು ಒಳ ಮೀಸಲಾತಿ ಜಾರಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ…?

ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಒಳ ಮೀಸಲಾತಿಯನ್ನು ಮೂರು ಗುಂಪುಗಳಾಗಿ ವಿಂಗಡಿಸಲು ತೀರ್ಮಾನಿಸಲಾಗಿದೆ. ಎಡ ಸಮುದಾಯಕ್ಕೆ ಶೇಕಡ 6, ಬಲ ಸಮುದಾಯಕ್ಕೆ ಶೇಕಡ 6, ಇತರೆ ಸ್ಪೃಶ್ಯ ಸಮುದಾಯಕ್ಕೆ ಶೇಕಡ 5ರಷ್ಟು ಮೀಸಲಾತಿ ನೀಡಲು ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಎಡಗೈ ಸಮುದಾಯ 18 ಜಾತಿಗಳು ಶೇಕಡ 6ರಷ್ಟು ಮೀಸಲಾತಿ, ಬಲಗೈ ಸಮುದಾಯ 20 ಜಾತಿಗಳು ಶೇಕಡ 6ರಷ್ಟು ಮೀಸಲಾತಿ, ಇತರೆ ಸ್ಪೃಶ್ಯ ಜಾತಿಗಳು 63 ಶೇಕಡ 5ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ್ಯಾಯಮೂರ್ತಿ ನಾಗಮೋಹನದಾಸ್ ವರದಿಯಲ್ಲಿ 5 ಗುಂಪುಗಳಾಗಿ ವಿಂಗಡಿಸಲಾಗಿತ್ತು. ದಲಿತ ಸಮುದಾಯಕ್ಕೆ ಒಳ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮೂರು ಗುಂಪುಗಳಾಗಿ ವರ್ಗೀಕರಣ ಮಾಡಿದೆ. ಎಡಗೈ ಸಮುದಾಯಕ್ಕೆ 6, ಬಲಗೈ ಸಮುದಾಯಕ್ಕೆ 6, ಸ್ಪೃಶ್ಯ ಸಮುದಾಯಕ್ಕೆ 5ರಷ್ಟು ಮೀಸಲಾತಿ ಅಂತಿಮಗೊಳಿಸುವ ಸಾಧ್ಯತೆ ಇದೆ.

ನಾಳೆ ಸದನದಲ್ಲಿ ಸಿಎಂ ಸಿದ್ಧರಾಮಯ್ಯ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನದ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular