HomeLatest Newsಗ್ಯಾರಂಟಿ ಯೋಜನೆಗಳಿಂದ ಹೆಚ್ಚಿದ ಒತ್ತಡ, ರಾಜ್ಯದಲ್ಲಿ ವಿತ್ತೀಯ ಕೊರತೆ: 63 ಸಾವಿರ ಕೋಟಿ ರೂ. ಸಾಲ...

ಗ್ಯಾರಂಟಿ ಯೋಜನೆಗಳಿಂದ ಹೆಚ್ಚಿದ ಒತ್ತಡ, ರಾಜ್ಯದಲ್ಲಿ ವಿತ್ತೀಯ ಕೊರತೆ: 63 ಸಾವಿರ ಕೋಟಿ ರೂ. ಸಾಲ ಪಡೆದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ ಜಾರಿಗೊಳಿಸಲಾಯಿತು ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ವೆಚ್ಚ ಮಾಡಿದ ಪರಿಣಾಮ 2023- 24ನೇ ಸಾಲಿನಲ್ಲಿ 9271 ಕೋಟಿ ರೂ. ರಾಜಸ್ವ ಕೊರತೆ ಉಂಟಾಗಿದೆ. ವಿತ್ತೀಯ ಕೊರತೆ 65,522 ಕೋಟಿ ರೂ.ಗೆ ಏರಿಕೆಯಾಗಲಿದೆ ಎಂದು ಸಿಎಜಿ ವರದಿ ತಿಳಿಸಿದೆ. ಈ ಕೊರತೆಗಳನ್ನು ಸರಿದೂಗಿಸಲು ಸರ್ಕಾರ 63,000 ಕೋಟಿ ರೂ. ಸಾಲ ಸಂಗ್ರಹಿಸಿದೆ. ಸಂಪನ್ಮೂಲದ ಮೇಲೆ ಗ್ಯಾರಂಟಿ ಯೋಜನೆಗಳಿಂದ ಒತ್ತಡವಾಗುತ್ತಿದೆ ಎಂದು ಹೇಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2023- 24ನೇ ಸಾಲಿಗೆ ಕೊನೆಗೊಂಡ ರಾಜ್ಯದ ಹಣಕಾಸು ವ್ಯವಹಾರಗಳ ಲೆಕ್ಕ ಪರಿಶೋಧನಾ ವರದಿಯಲ್ಲಿ 2023- 24ರಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಪಂಚ ಗ್ಯಾರಂಟಿ ಯೋಜನೆಗಳಿಂದ ಎದುರಾಗುತ್ತಿರುವ ಆರ್ಥಿಕ ಪರಿಣಾಮಗಳ ಬಗ್ಗೆ ಹಲವು ಅಂಶಗಳನ್ನು ಉಲ್ಲೇಖಿಸಲಾಗಿದೆ. ವಿತ್ತೀಯ ಕೊರತೆ ರಾಜ್ಯಸ್ವ ಕೊರತೆ ಸರಿದೂಗಿಸಲು ರಾಜ್ಯ ಸರ್ಕಾರ 63,000 ಕೋಟಿ ರೂ. ನಿವ್ವಳ ಮಾರುಕಟ್ಟೆ ಸಾಲ ಪಡೆದುಕೊಂಡಿದೆ. 2022 -23ಕ್ಕೆ ಹೋಲಿಸಿದರೆ 37 ಸಾವಿರ ಕೋಟಿ ರೂ. ಹೆಚ್ಚಿನ ನಿವ್ವಳ ಮಾರುಕಟ್ಟೆ ಸಾಲ ಪಡೆಯಲಾಗಿದೆ. ಗ್ಯಾರಂಟಿ ಯೋಜನೆಗಳ ಕಾರಣದಿಂದ ಬಂಡವಾಳ ವೆಚ್ಚವನ್ನು 5229 ಕೋಟಿ ರೂ. ಕಡಿಮೆ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular