ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು , ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯನ್ನು ಹತ್ಯೆ ಮಾಡಿ ಬೆಂಕಿ ಹಚ್ಚಿ ಸುಟ್ಟಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕೊವೇರಹಟ್ಟಿ ಮೂಲದ 19 ವರ್ಷದ ವಿದ್ಯಾರ್ಥಿನಿ ವರ್ಷಿತಾ ಎಂಬ ವಿದ್ಯಾರ್ಥಿನಿಯನ್ನು ಕೊಂದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ವಿದ್ಯಾರ್ಥಿನಿ ಚಿತ್ರದುರ್ಗ ನಗರದ ಬಾಲಕಿಯರ ವಸತಿ ಶಾಲೆಯಲ್ಲಿ ಓದುತ್ತಿದ್ದಳು. ನಿನ್ನೆ ವಿದ್ಯಾರ್ಥಿನಿ ಶವ ಚಿತ್ರದುರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಪತ್ತೆಯಾಗಿದೆ.
ಕೊಲೆ ಮಾಡಿ ಪೆಟ್ರೋಲ್ ಎರಚಿ ಸುಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ವಿದ್ಯಾರ್ಥಿನಿ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

