ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರ ಗ್ರಾಮದ 6 ವರ್ಷದ ಬಾಲಕ ಲೋ ಬಿಪಿಯಿಂದ(ಕಡಿಮೆ ರಕ್ತದೊತ್ತಡ) ಮೃತಪಟ್ಟಿದ್ದಾನೆ.
ಮಹೇಶ್ ಮತ್ತು ಸುಮಾ ದಂಪತಿಯ ಪುತ್ರ ಆರ್ಯ ಮೃತಪಟ್ಟ ಬಾಲಕ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದ ಆರ್ಯ ಸೋಮವಾರ ಶಾಲೆಯಿಂದ ಮನೆಗೆ ಬಂದ ಬಳಿಕ ಜ್ವರ ಬಂದಿದೆ.
ಪೋಷಕರು ಆರ್ಯನನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಿದ್ದು, ಪರೀಕ್ಷಿಸಿದ ವೈದ್ಯರು ಬಿಪಿ ಕಡಿಮೆಯಾಗುತ್ತಿದೆ. ಕೂಡಲೇ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಸೂಚಿಸಿದ್ದಾರೆ. ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ. ಪುತ್ರನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.