HomeLatest NewsSHOCKING NEWS: 5 ವರ್ಷಗಳಲ್ಲಿ ಕರ್ನಾಟಕದಲ್ಲಿ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆ!

SHOCKING NEWS: 5 ವರ್ಷಗಳಲ್ಲಿ ಕರ್ನಾಟಕದಲ್ಲಿ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆ!

ಬೆಂಗಳೂರು: ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆಯಾಗಿದ್ದು, ಅದರಲ್ಲಿ ಹೆಣ್ಣು ಮಕ್ಕಳ ಸಂಖ್ಯೆಯೇ ಹೆಚ್ಚಿದೆ.

ರಾಜ್ಯದಲ್ಲಿ ಮಕ್ಕಳು ನಾಪತ್ತೆ ಪ್ರಕರಣದ ಬಗ್ಗೆ ಖುದ್ದು ಗೃಹ ಸಚಿವ ಪರಮೇಶ್ವರ್ ವಿಧಾನಪರಿಷತ್ ನಲ್ಲಿ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ 14 ಸಾವಿರಕ್ಕೂ ಹೆಚ್ಚಿ ಮಕ್ಕಳು ಕಾಣೆಯಾಗಿದ್ದು, ಆ ಪೈಕಿ 1336 ಮಕ್ಕಳು ಇನ್ನೂ ನಿಗೂಢರಾಗಿದ್ದಾರೆ. ಕಿಡ್ನ್ಯಾಪ್ ಹಾಗೂ ನಿಗೂಢ ನಾಪತ್ತೆ ಕೇಸ್ ನಲ್ಲಿ ಹೆಣ್ಣು ಮಕ್ಕಳ ಸಂಖ್ಯೆಯೇ ಅಧಿಕವಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದರಲ್ಲಿಯೂ ಮಕ್ಕಳು ನಾಪತ್ತೆಯಾಗಿರುವ ಪ್ರಕರಣದಲ್ಲಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ ಮಕ್ಕಳ ಅಪಹರಣ ಪ್ರಕರಣ ವರ್ಷದಿಂದ ವರ್ಷ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ.

ಈ ವರ್ಷ ಜುಲೈ ಅಂತ್ಯಕ್ಕೆ 2,170 ಮಕ್ಕಳು ನಾಪತ್ತೆಯಾಗಿದ್ದರು. 2020 ರಿಂದ ಈವರೆಗೂ ರಾಜ್ಯದಲ್ಲಿ 14,878 ಮಕ್ಕಳು ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿದೆ. ಈ ಪೈಕಿ 13,542 ಪ್ರಕರಣಗಳಲ್ಲಿ ಮಕ್ಕಳು ಪೋಷಕರ ಮಡಿಲಿಗೆ ಸೇರಿದ್ದಾರೆ. ಉಳಿದ 1336 ಮಕ್ಕಳು ಇನ್ನೂ ನಿಗೂಢವಾಗಿದ್ದಾರೆ. ಅಪಹರಣಕ್ಕೆ ಒಳಗಾದ 10,792 ಹೆಣ್ಣು ಮಕ್ಕಳ ಪೈಕಿ 1,002 ಮಂದಿ ನಾಪತ್ತೆಯಾಗಿದ್ದಾರೆ. 4086 ಗಂಡು ಮಕ್ಕಳ ಪೈಕಿ 333 ಮಕ್ಕಳು ನಿಗೂಢರಾಗಿದ್ದಾರೆ.

ಅಪಹರಣ ಪ್ರಕರಣದಲ್ಲಿ 5 ವರ್ಷಗಳಲ್ಲಿ 634 ಅಪಹರಣಕಾರರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಮಕ್ಕಳು ನಾಪತ್ತೆ ಪ್ರಕರಣದಲ್ಲಿ ಬೆಂಗಳುರು ಮೊದಲ ಸ್ಥಾನ, ದಾವಣಗೆರೆ ಎರಡನೇ ಸ್ಥಾನ, ಉಡುಪಿ ಮೂರನೇ ಸ್ಥಾನ ಬಳಿಕ ದಕ್ಷಿಣ ಕನ್ನಡ, ಹಾವೇರಿ, ಚಿತ್ರದುರ್ಗ, ತುಮಕೂರು, ಮೈಸೂರು ನಂತರದ ಸ್ಥಾನಗಳಲ್ಲಿವೆ.

For Latest News Updates, Join Our Whatsapp Community🚩
RELATED ARTICLES

Most Popular