ಮನೆ ಬಾಗಿಲಿಗೆ ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ)

ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಸಂರಕ್ಷಣೆ, ಸಮಾನ ಅವಕಾಶ ಮತ್ತು ಪೂರ್ಣ ಭಾಗವಹಿಸುವಿಕೆಗಾಗಿ ಭಾರತ ಸರ್ಕಾರವು ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ಜಾರಿಗೆ ಬಂದಿರುತ್ತದೆ. ವಿಧದ ರೀತಿಯ ವಿಕಲಚೇತನರನ್ನು ಒಳಗೊಂಡಂತೆ ಎಲ್ಲರಿಗೂ ಅಂಗವಿಕಲರ ವೈದ್ಯಕೀಯ ಪ್ರಮಾಣ ಪತ್ರವನ್ನು ಪರಿಷ್ಕರಿಸಿ ಹೊಸ ಮಾದರಿಯ (Unique Disability Identity card) ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಆಯಾ ತಾಲ್ಲೂಕು ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿರುವ ವೈದ್ಯಕೀಯ ಮಂಡಳಿಯಿಂದ ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ.

ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ರಲ್ಲಿರುವಂತೆ 21 ವಿವಿಧ ರೀತಿಯ ವಿಕಲಾಂಗತೆಯನ್ನು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲ ವಿಶೇಷಚೇತನರು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ವೈದ್ಯಕೀಯ ಪ್ರಾಧಿಕಾರ ಹಾಗೂ ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ವೈದ್ಯಕೀಯ ಪ್ರಾಧಿಕಾರ ದಿಂದ ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿಯನ್ನು ಪಡೆಯ ಬಹುದಾಗಿರುತ್ತದೆ. ಅಲ್ಲದೆ, ಆಯಾ ತಾಲ್ಲೂಕು ಮಟ್ಟದ ತಾಲ್ಲೂಕು ಆಸ್ಪತ್ರೆಯಲ್ಲಿನ ತಾಲ್ಲೂಕು ವೈದ್ಯಕೀಯ ಪ್ರಾಧಿಕಾರ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿನ ಜಿಲ್ಲಾ ವೈದ್ಯಕೀಯ ಪ್ರಾಧಿಕಾರ ದವರನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿ ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿಯನ್ನು ಪಡೆಯಲು ಈ ಮೂಲಕ ತಿಳಿಸಲಾಗಿದೆ.

ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು, ತಾಲ್ಲೂಕು ಪಂಚಾಯತ್, ಹಾಸನ ದೂ.ಸಂ: 9964536271, ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು, ತಾಲ್ಲೂಕು ಪಂಚಾಯತ್, ಆಲೂರು ದೂ.ಸಂ:803282343, ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು, ತಾಲ್ಲೂಕು ಪಂಚಾಯತ್,ಅರಸೀಕೆರೆ ದೂ.ಸಂ:9902649777, ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು, ತಾಲ್ಲೂಕು ಪಂಚಾಯತ್, ಅರಕಲಗೂಡು ದೂ.ಸಂ:9902757869, ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು, ತಾಲ್ಲೂಕು ಪಂಚಾಯತ್, ಸಕಲೇಶಪುರ ದೂ.ಸಂ:9482262448.

ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು, ತಾಲ್ಲೂಕು ಪಂಚಾಯತ್, ಚನ್ನರಾಯಪಟ್ಟಣ ದೂ.ಸಂ:9731401621, ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು, ತಾಲ್ಲೂಕು ಪಂಚಾಯತ್,ಹೊಳೆನರಸೀಪುರ ದೂ.ಸಂ:9844229927, ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು, ತಾಲ್ಲೂಕು ಪಂಚಾಯತ್, ಬೇಲೂರು ದೂ.ಸಂ:9148693527.

ಆಯಾ ಗ್ರಾಮ ಪಂಚಾಯಿತಿಯ ಕಚೇರಿಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ನಗರ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆ/ನಗರಸಭೆ/ ಪುರಸಭೆ/ಪಟ್ಟಣ ಪಂಚಾಯಿತಿಯ ನಗರ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸ ಬಹುದಾಗಿದೆ. ಜೊತೆಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, 9ನೇ ಕ್ರಾಸ್, ಶಂಕರ ಮಠ ರಸ್ತೆ, ಕೆ.ಆರ್.ಪುರಂ, ಹಾಸನ ಇಲ್ಲಿನ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂ.ಸಂ: 08172-295546 ರವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read