ಭೋಪಾಲ್: ಕೆಲ ದಿನಗಳಿಂದ ರೈಲಿನಲ್ಲಿ ನಾಪತ್ತೆಯಾಗಿದ್ದ ಮಧ್ಯಪ್ರದೇಶದ ಹೈಕೋರ್ಟ್ ತರಬೇತಿ ವಕೀಲೆ ನೇಪಾಳ ಗಡಿಯಲ್ಲಿ ಪತ್ತೆಯಾಗಿದ್ದಾರೆ.
ಅರ್ಚನಾ ತಿವಾರಿ ಎಂಬ ತರಬೇತಿ ವಕೀಲೆ ರಕ್ಷಾ ಬಂಧನ ಹಬ್ಬಕ್ಕಾಗಿ ಆಗಸ್ಟ್ ೭ರಂದು ರಾತ್ರಿ ಇಂದೋರ್ ನ ಕಟ್ನೆಗೆ ರೈಲಿನಲ್ಲಿ ಹೊರಟಿದ್ದರು. ಆದರೆ ಅವರು ಕಟ್ನೆಗೆ ತಲುಪಿರಲಿಲ್ಲ. ಈ ವೇಳೆ ಅರ್ಚನಾ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿತ್ತು.
ಅರ್ಚನಾ ಪತ್ತೆಗಾಗಿ ಕಳೆದ 12 ದಿನಗಳಿಂದ ಪೊಲೀಸರು ಹುಡುಕಾಟ ನಡೆಸಿದ್ದರು. ರಕ್ಷಾ ಬಂಧನ ಹಬ್ಬಕ್ಕಾಗಿ ಕಟ್ನಾಗೆ ನರ್ಮಾದಾ ಎಕ್ಸ್ ಪ್ರೆಸ್ ರೈಲಿನಲ್ಲಿ ಹೊರಟಿದ್ದ ಅರ್ಚನಾ ಕೊನೆಯದಗಿ ಇಟಾರ್ಸಿ ರೈಲು ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಆ ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ರೈಲ್ವೆ ಪೊಲೀಸರು ತೀವ್ರ ಹುಡುಕಾಟದ ಬಳಿಕ ಇದೀಗ ಅರ್ಚನಾರನ್ನು ನೇಪಾಳ ಗಡಿಯಲ್ಲಿ ಪತ್ತೆ ಮಾಡಿದ್ದಾರೆ.
ಸದ್ಯ ಅವರನ್ನು ಭೋಪಾಲ್ ಗೆ ಕರೆತರಲಾಗುತ್ತಿದ್ದು, ಅವರಿಂದ ಹೇಳಿಕೆ ದಾಖಲಿಸಿಕೊಂಡ ಬಳಿಕವೇ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ರೈಲ್ವೆ ಎಸ್ ಪಿ ರಾಹುಲ್ ಕುಮಾರ್ ತಿಳಿಸಿದ್ದಾರೆ. ಅರ್ಚನಾ ತಿವಾರಿ ಮಧ್ಯಪ್ರದೇಶದ ಹೈಕೋರ್ಟ್ ನ ಇಂದೋರ್ ಪೀಠದಲ್ಲಿ ಅಭ್ಯಾಸ ವಕೀಲರಾಗಿದ್ದರು. ಸಿವಿಲ್ ನ್ಯಾಯಾಧೀಶರ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು.