ಕೊಪ್ಪಳ: ಕೆಲ ದಿನಗಳಿಂದ ಮಳೆಯ ಅಬ್ಬರ ಜೋರಾಗಿದ್ದು, ತುಂಗಭದ್ರಾ ಡ್ಯಾಂ ನಲ್ಲಿ ಒಳಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ.
ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನಿರು ಹೊರ ಬಿಡಲಾಗುತ್ತಿರುವುದರಿಂದ ತುಂಗಭದ್ರಾ ನದಿ ಸುತ್ತಮುತ್ತಲು ಪ್ರವಾಹ ಭೀತಿ ಎದುರಾಗಿದೆ. ಕೊಪ್ಪಳ ಜಿಲ್ಲೆಯ ಹಲವೆಡೆ ನದಿ ಪಾತ್ರದ ಗ್ರಾಮಗಳಿಗೆ ಕಟ್ಟೆಚ್ಚರ ಘೋಷಿಸಲಾಗಿದೆ.
ತುಂಗಭದ್ರಾ ನದಿ ಅಬ್ಬರಕ್ಕೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ, ಹಂಪಿಯ ಐತಿಹಾಸಿಕ ಸ್ಮಾರಕಗಳು ಮುಳುಗಡೆಯಾಗಿವೆ. ನವವೃಂದಾವನ ಗಡ್ಡೆಯ ಬಳಿಯ ಸ್ಮಾರಕಗಳು ಜಲಾವೃತಗೊಂಡಿವೆ.
ಶ್ರೀಕೃಷ್ಣದೇವರಾಯ ಸಮಾಧಿ, ಸೂರ್ಯನಾರಾಯಣ ಮಂಟಪ ಬಹುತೇಕ ಮುಳುಗಡೆಯಾಗಿವೆ. ನವವೃಂದಾವನಕ್ಕೆ ಸಂಪರ್ಕ ಸೇತುವೆಯಾಗಿದ್ದ ಬೋಟ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.