ನವದೆಹಲಿ: ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ 15 ಭಾಷೆಗಳಲ್ಲಿ ನಡೆಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ದಾವಣಗೆರೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪ್ರಶ್ನೆಗೆ ಸಚಿವ ಅಶ್ವಿನಿ ವೈಷ್ಣವ್ ಉತ್ತರ ನೀಡಿದ್ದಾರೆ.
ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಜಿ ಸಲ್ಲಿಸುವ ಎಲ್ಲರನ್ನು ಸಮಾನವಾಗಿ ಪರಿಗಣಿಸಲಾಗುವುದು. ಯಾವುದೇ ರಾಜ್ಯ ಅಥವಾ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡುವುದಿಲ್ಲ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ 15 ಭಾಷೆಗಳ ಪೈಕಿ ಯಾವುದಾದರೂ ಒಂದು ಪರೀಕ್ಷಾ ಮಾಧ್ಯಮ ಆಯ್ಕೆ ಮಾಡಿಕೊಳ್ಳಬೇಕು. ಅಭ್ಯರ್ಥಿ ಆಯ್ಕೆ ಮಾಡಿದ ಭಾಷೆಯಲ್ಲಿ ಮತ್ತು ಇಂಗ್ಲಿಷ್ ನಲ್ಲಿ ಪ್ರಶ್ನೆಗಳನ್ನು ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.