HomeLatest NewsBREAKING NEWS: ಅನನ್ಯ ಭಟ್ ನಾಪತ್ತೆ ಪ್ರಕರಣ ತನಿಖೆ ಅಧಿಕೃತವಾಗಿ ಎಸ್ಐಟಿಗೆ ಹಸ್ತಾಂತರ: ಸರ್ಕಾರ ಆದೇಶ

BREAKING NEWS: ಅನನ್ಯ ಭಟ್ ನಾಪತ್ತೆ ಪ್ರಕರಣ ತನಿಖೆ ಅಧಿಕೃತವಾಗಿ ಎಸ್ಐಟಿಗೆ ಹಸ್ತಾಂತರ: ಸರ್ಕಾರ ಆದೇಶ

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರ ಮಾಡಲಾಗಿದೆ. ಪ್ರಕರಣವನ್ನು ಅಧಿಕೃತವಾಗಿ ಎಸ್ಐಟಿ ತನಿಖೆಗೆ ಹಸ್ತಾಂತರ ಮಾಡಿ ಆದೇಶ ಹೊರಡಿಸಲಾಗಿದೆ.

ಡಿಜಿ ಐಜಿಪಿ ಆದೇಶದ ಮೇರೆಗೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರ ಮಾಡಲಾಗಿದೆ. 2003ರಲ್ಲಿ ಧರ್ಮಸ್ಥಳದಲ್ಲಿ ಅನನ್ಯ ಭಟ್ ಕಾಣೆಯಾಗಿದ್ದ ಬಗ್ಗೆ ದೂರು ಸಲ್ಲಿಕೆಯಾಗಿತ್ತು. ಧರ್ಮಸ್ಥಳ ಪೊಲೀಸ್ ಠಾಣೆಗೆ ಸುಜಾತ ಭಟ್ ದೂರು ನೀಡಿದ್ದರು. ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಇದೀಗ ಅಧಿಕೃತವಾಗಿ ಎಸ್ಐಟಿಗೆ ಹಸ್ತಾಂತರ ಮಾಡಿ ಆದೇಶ ಹೊರಡಿಸಲಾಗಿದೆ. ಎಸ್ಐಟಿ ಪ್ರಕರಣದ ತನಿಖೆ ಕೈಗೊಳ್ಳಲಿದೆ.

ಧರ್ಮಸ್ಥಳದಲ್ಲಿ ನೂರಾರು ಶವ ಹೂಡಲಾಗಿದೆ ಎನ್ನುವ ಪ್ರಕರಣದ ನಡುವೆ ಧರ್ಮಸ್ಥಳದಲ್ಲಿ 2003ರಲ್ಲಿ ನನ್ನ ಪುತ್ರಿ ಅನನ್ಯ ಭಟ್ ನಾಪತ್ತೆಯಾಗಿದ್ದಾಳೆ ಎಂದು ಸುಜಾತ ಭಟ್ ಹೇಳಿಕೆ ನೀಡಿದ್ದರು. ತನ್ನ ಮಗಳು ಅನನ್ಯ ಭಟ್ ಅವರ ಫೋಟೋ ಎಂದು ಫೋಟೋ ಕೂಡ ಬಿಡುಗಡೆ ಮಾಡಿದ್ದರು. ಆದರೆ ಆ ಫೋಟೋ ವಾಸಂತಿ ಅವರದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular