BIG NEWS: ಪರಿಶಿಷ್ಟ ಜಾತಿಗಳ ಚಲನಶೀಲತೆ ಅಧ್ಯಯನಕ್ಕೆ ಶಾಶ್ವತ ಆಯೋಗ ರಚನೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲು ತೀರ್ಮಾನಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ, ಒಳ ಮೀಸಲಾತಿಯ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನಿಸಿದ್ದೇವೆ. ಇದೇ ಸಂದರ್ಭದಲ್ಲಿ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ ಎಂದು ಹೇಳಿದ್ದಾರೆ.

ಸರ್ಕಾರವು ಈಗ ಕೈಗೊಂಡಿರುವ ತೀರ್ಮಾನದಲ್ಲಿ ಯಾವುದಾದರೂ ಮಾರ್ಪಾಡುಗಳ ಅಗತ್ಯತೆ ಕಂಡುಬಂದರೆ ಅವುಗಳನ್ನು ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿನ ಅಂಕಿ-ಅಂಶಗಳನ್ನು ಆಧರಿಸಿ ಬದಲಾವಣೆಗೆ ಒಳಪಡಿಸುವ ಷರತ್ತಿಗೆ ಬದ್ಧವಾಗಿದೆ. ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರ ವರದಿಯನ್ನು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದೆ. ಈ ತೀರ್ಮಾನವು ಒಳ ಮೀಸಲಾತಿ ಕುರಿತ ದಶಕಗಳ ಹೋರಾಟಕ್ಕೆ ನ್ಯಾಯ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಭಾವಿಸಿದ್ದೇವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read