ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ತಡೆಯಾಜ್ಞೆ ತೆರವಿಗೆ ಸರ್ಕಾರ ಮನವಿ ಮಾಡಿದೆ.
ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಬಾಲಕಿ ಸಾಕ್ಷಿ ನುಡಿಯಲು ಕಳೆದ ಎರಡು ವರ್ಷಗಳಿಂದ ಕಾಯುವಂತೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ನಲ್ಲಿ ವಾದ ಮಂಡಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಏಕ ಸದಸ್ಯ ಪೀಠದಲ್ಲಿ ನಡೆಯಿತು. ರಾಜ್ಯ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮಕುಮಾರ್ ಅವರು ವಾದ ಮಂಡಿಸಿದರು.
2024ರ ಫೆಬ್ರವರಿ 2ರಂದು ಪ್ರಕರಣ ನಡೆದಿದ್ದು ಆರೋಪ ಪಟ್ಟಿ ಸಲ್ಲಿಸಲಾಗಿದೆ. ವಿಚಾರಣಾ ನ್ಯಾಯಾಲಯ ಪ್ರಕಾರವನ್ನು ವಿಚಾರಣೆಗೆ ಪರಿಗಣಿಸಿದೆ. ಆದರೆ ವಿಚಾರಣೆ ವಿಳಂಬ ಮಾಡಲಾಗುತ್ತಿದೆ. ಹೀಗಾಗಿ ತಡೆಯಾಜ್ಞೆ ಮುಂದುವರಿಸಬಾರದು ಎಂದು ಮನವಿ ಮಾಡಿದ್ದಾರೆ.